ಬೆಂಗಳೂರು: ಬುಡಕಟ್ಟು ಪಂಗಡಗಳಿಗೆ ಉಚಿತವಾಗಿ ಪೌಷ್ಟಿಕ ಆಹಾರ ಸರಬರಾಜು ಮಾಡಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
120 ಕೋಟಿ ರೂಪಾಯಿ ವೆಚ್ಚದಲ್ಲಿ ಪೌಷ್ಟಿಕ ಆಹಾರ ಸರಬರಾಜು ಮಾಡಲು ಸಂಪುಟ ಸಭೆ ಅನುಮೋದನೆ ನೀಡಿದೆ. 50.15 ಕೋಟಿ ರೂ.ವೆಚ್ಚದಲ್ಲಿ ರಾಸಾಯನಿಕ, ಕಂಪ್ಯೂಟರ್ ರೆಡಿಯಾಗ್ರಫಿ ಸಿಸ್ಟಮ್ ಗೆ ಡ್ರೈಲೇಸರ್ ಎಕ್ಸ್ ರೇ ಖರೀದಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಎರಡು ಇಂದಿರಾ ಕ್ಯಾಂಟೀನ್ ಆರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.