ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2024 ನೇ ಸಾಲಿನ ಅವಧಿಗೆ ಗಳಿಕೆ ರಜೆ ಅದ್ಯರ್ಪಿಸಿ ನಗದೀಕರಣಕ್ಕೆ ರಾಜ್ಯ ಸರ್ಕಾರವು ಅನುಮತಿ ನೀಡಿದೆ.
ಈ ಕುರಿತು ರಾಜ್ಯ ಸರ್ಕಾರವು ಅದೇಶ ಹೊರಡಿಸಿದ್ದು, 2023 ನೇ ಸಾಲಿನ ಬ್ಲಾಕ್ ಅವಧಿಗೆ ಸರ್ಕಾರಿ ಅಧಿಕಾರಿ/ನೌಕರರು ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118 (2)(i) ರನ್ವಯ ಅವಕಾಶ ಕಲ್ಪಿಸಲಾಗಿತ್ತು.
ಸದರಿ ಬ್ಲಾಕ್ ಅವಧಿಯು ದಿನಾಂಕ 31.12.2023 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2024 ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನ ಗಳಿಕೆ ರಜೆಯನ್ನು ಅಧರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ನಗದೀಕರಣ ಪಡೆಯುವ ಅವಕಾಶವನ್ನು ಸರ್ಕಾರಿ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿಸಿದ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ತೀರ್ಮಾನಿಸಿದೆ. ಅದರಂತೆ ಈ ಆದೇಶ ಹೊರಡಿಸಲಾಗಿದೆ.
ಅರ್ಹವಾಗುವ ಷರತ್ತಿಗೊಳಪಡಿಸಿ ಮಂಜೂರು ಮಾಡತಕ್ಕದ್ದು. ಮುಂದುವರೆದು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ 118 ರಲ್ಲಿ ನಿಗದಿಪಡಿಸಿರುವ ಗಳಿಕೆ ರಜೆ ನಗದೀಕರಣ ನಿಯಂತ್ರಣಕ್ಕೆ ಸಂಬಂಧಿಸಿದ ಇತರೆ ಷರತ್ತುಗಳು ಅನ್ವಯವಾಗುತ್ತವೆ ಎಂದು ತಿಳಿಸಿದೆ.