
ದತ್ತಜಯಂತಿ ಉತ್ಸವದ ಕಡೆಯ ದಿನ 5 ತಾಲೂಕುಗಳಲ್ಲಿ ಮದ್ಯದಂಗಡಿಗಳನ್ನು ಬಂದ್ ಮಾಡಿಸಲಾಗುತ್ತಿದೆ. ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರದಲ್ಲಿ ಮದ್ಯದಂಗಡಿಗಳನ್ನು ತೆರೆಯದಂತೆ ಆದೇಶಿಸಲಾಗಿದೆ.
ದತ್ತಜಯಂತಿಯ ಹಿನ್ನೆಲೆಯಲ್ಲಿ ದೇವಸ್ಥಾನದ ಭಕ್ತಾದಿಗಳಿಗೆ ಹೊರತುಪಡಿಸಿ ಚಂದ್ರದ್ರೋಣ ಪರ್ವತಗಳ ಸಾಲಿನ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದೆ. ಇಂದಿನಿಂದ ಡಿಸೆಂಬರ್ 27 ರವರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.

