ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಧರ್ಮಾವರಂ ಪಟ್ಟಣದಲ್ಲಿ ಈ ದುರಂತ ಸಂಭವಿಸಿದೆ. ಸಲಾರ್ ಚಿತ್ರದ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಆಘಾತದಿಂದ ಅಭಿಮಾನಿಯೊಬ್ಬರು ಮೃತಪಟ್ಟಿದ್ದಾರೆ.
ಪ್ರಭಾಸ್ ಅಭಿಮಾನಿ ಬಾಲರಾಜು (27) ಗುರುವಾರ ಪಟ್ಟಣದ ರಂಗ ಚಿತ್ರಮಂದಿರದ ಮುಂಭಾಗದ ಮೇಲೆ ಫ್ಲೆಕ್ಸಿ ಹಾಕುವಾಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ. ಫ್ರೇಮ್ ಮೇಲಿದ್ದ ಕಬ್ಬಿಣದ ರಾಡ್ ವಿದ್ಯುತ್ ತಂತಿಗಳಿಗೆ ತಗುಲಿದ ಪರಿಣಾಮ ಬಾಲರಾಜು ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಜೇಂದ್ರ ಎಂಬ ಯುವಕ ಗಾಯಗೊಂಡಿದ್ದಾನೆ.
ಇತರ ನಾಲ್ವರು ಯುವಕರು ಅವಘಡದಲ್ಲಿ ಬದುಕುಳಿದಿದ್ದಾರೆ. ವಿದ್ಯುತ್ ತಂತಿಗಳು ಕಡಿಮೆ ಎತ್ತರವಾಗಿರುವುದರಿಂದ ಅಪಘಾತ ಸಂಭವಿಸಿದೆ ಎಂದು ಬಾಲರಾಜು ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಮೃತ ಬಾಲರಾಜು ಬಟ್ಟೆ ವ್ಯಾಪಾರ ನಡೆಸುತ್ತಿದ್ದರು. ಸ್ಥಳಕ್ಕೆ ಧರ್ಮಾವರಂ 1ನೇ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.