ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ. ಅಂತಿಮ ಟಿ ಟ್ವೆಂಟಿ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ನಾಲ್ಕು ವಿಕೆಟ್ ಗಳಿಂದ ವಿಕೆಟ್ ಗಳಿಂದ ಜಯಭೇರಿ ಯಾಗುವ ಮೂಲಕ. 3-2 ರಿಂದ ಸರಣಿ ತನ್ನದಾಗಿಸಿಕೊಂಡಿದೆ. ವೆಸ್ಟ್ ಇಂಡೀಸ್ ತನ್ನ ತವರಿನಲ್ಲಿ ಏಕದಿನ ಸರಣಿ ಹಾಗೂ ಟಿ ಟ್ವೆಂಟಿ ಸರಣಿಯನ್ನು ಗೆಲ್ಲುವ ಮೂಲಕ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದಿದೆ.
ಇಂದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕ ಮಾಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ಕೇವಲ 132ರನ್ಗಳ ಸಾಧಾರಣ ಮೊತ್ತ ದಾಖಲಿಸಿದ್ದು, ವೆಸ್ಟ್ ಇಂಡೀಸ್ ತಂಡ ಆರು ವಿಕೆಟ್ ನಷ್ಟಕ್ಕೆ 133 ರನ್ ಬಾರಿಸುವ ಮೂಲಕ ಜಯಭೇರಿ ಯಾಗಿದೆ.