HomeKarnatakaBREAKING NEWS: ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಪ್ರಕರಣ; ಮುಖ್ಯ ಶಿಕ್ಷಕಿ ಸಸ್ಪೆಂಡ್

BREAKING NEWS: ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಪ್ರಕರಣ; ಮುಖ್ಯ ಶಿಕ್ಷಕಿ ಸಸ್ಪೆಂಡ್

ಬೆಂಗಳೂರು: ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀ ದೇವಮ್ಮ ಅವರನ್ನು ಅಮಾನತು ಮಾಡಲಾಗಿದೆ. ಪೀಣ್ಯದ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ದ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಬೆಂಗಳೂರು ಉತ್ತರ ಬಿಇಒ ಕೆ.ಜಿ.ಅಂಜನಪ್ಪ, ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಶೌಚಗುಂಡಿ ಕ್ಲೀನ್ ಮಾಡಿಸಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿಯೂ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿರುವ ಘಟನೆ ನಡೆದಿದ್ದು, ಪೋಷಕರು, ಸ್ಥಳೀಯರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular