![](https://kannadadunia.com/wp-content/uploads/2022/11/siddaramaiah-1200.jpg)
ಮೈಸೂರು : ಇಂಡಿಯಾ ಮೈತ್ರಿಕೂಟ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಇಂಡಿಯಾ ಮೈತ್ರಿಕೂಟದ ಸಭೆಯಲ್ಲೇ ತೀರ್ಮಾನ ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದರು.
ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತ್ತು ಮಾಡಿರಲಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದವರು ಪ್ರಭಾಪ್ರಭುತ್ವವನ್ನು ಹಾಗೂ ಜನರ ಭಾವನೆಯನ್ನು ಗೌರವಿಸುತ್ತಿಲ್ಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜನರು ಸರಿಯಾದ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.