ನವದೆಹಲಿ : ಮಾಜಿ ಸಿಎಂ ಕುಮಾರಸ್ವಾಮಿ ಅವರು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ.
ದೆಹಲಿಯ ರಾಜನಾಥ್ ಸಿಂಗ್ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಕೆಲಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಜೆಡಿಎಸ್ ನಾಯಕ ಕುಪೇಂದ್ರ ರೆಡ್ಡಿ ಕೂಡ ಉಪಸ್ಥಿತರಿದ್ದರು.
ನಿನ್ನೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮಾಜಿ ಸಚಿವ ರೇವಣ್ಣ , ಮಾಜಿ ಸಿಎಂ ಕುಮಾರಸ್ವಾಮಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು.