BREAKING : ‘ಕೋವಿಡ್’ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಸಂಪುಟ ಉಪಸಮಿತಿ ರಚನೆ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪುಟ ಉಪಸಮಿತಿ ರಚನೆ ಮಾಡಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಾಲ್ವರು  ಸಚಿವರನ್ನು   ಒಳಗೊಂಡ ಸಂಪುಟ ಉಪಸಮಿತಿಯನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ.  ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕಮಿಟಿ ಅಧ್ಯಕ್ಷರನ್ನಾಗಿ ಮಾಡಲಾಗಿದ್ದು, ಉಪ ಸಮಿತಿಯಲ್ಲಿ ಸಚಿವ ಹೆಚ್ ಸಿ ಮಹಾದೇವಪ್ಪ, ಸಚಿವ ಶರಣ ಪ್ರಕಾಶ್ ಪಾಟೀಲ್, ಎಂ.ಸಿ ಸುಧಾಕರ್ ಇದ್ದಾರೆ.ಕೋವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಪರಾಮರ್ಶಿಸಲು ಸರ್ಕಾರ ಸಮಿತಿ ರಚನೆ ಮಾಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಸಕಲ ಸಿದ್ದತೆ ಕೈಗೊಂಡಿದೆ. ಇದೀಗ  ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪುಟ ಉಪಸಮಿತಿ ರಚನೆ ಮಾಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read