ಬೆಂಗಳೂರು : ಬೆಂಗಳೂರಿನ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಪ್ರಕರಣ ತನಿಖೆಯಾಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ವಿಚಾರವನ್ನು ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ, ಖಂಡಿತ ಇಂತಹ ಘಟನೆಗಳು ನಡೆಯಬಾರದು ಎಂದರು.ಶಾಲೆಯಲ್ಲಿ ಮಕ್ಕಳನ್ನು ಈ ರೀತಿಯಾದ ಕೆಲಸಕ್ಕೆ ಬಳಸಿಕೊಳ್ಳಬಾರದು, ಶಿಕ್ಷಣ ಇಲಾಖೆ ಆಗಿ ಸುತ್ತೋಲೆ ಹೊರಡಿಸಬೇಕು ಎಂದು ಸಲಹೆ ನೀಡಿದರು. ಯಾರು ಮಕ್ಕಳ ಬಳಿ ಇಂತಹ ಕೆಲಸ ಮಾಡಿಸಿದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ ಎಂದರು.
ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿಯೂ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿರುವ ಘಟನೆ ನಡೆದಿದ್ದು, ಪೋಷಕರು, ಸ್ಥಳೀಯರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.