HomeKarnatakaಹೆಂಡತಿಯನ್ನು ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ

ಹೆಂಡತಿಯನ್ನು ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ

ಕಲಬುರ್ಗಿ: ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಪತಿ ಮಹಾಶಯನೊಬ್ಬ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಅಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಮಾರುತಿ ಈಳಿಗೇರ್ ಪತ್ನಿಯನ್ನು ಕೊಂದ ಆರೋಪಿ. ಕಾಶಮ್ಮ ಮೃತ ಮಹಿಳೆ. ಮಾರುತಿ ಹಾಗೂ ಕಾಶಮ್ಮ ದಂಪತಿಗೆ ಮೂರು ಮಕ್ಕಳಿದ್ದು, ಮಗಳು ಮದುವೆಯಾಗಿ ಗಂಡನ ಮನೆಯಲ್ಲಿದ್ದಾಳೆ. ಇಬ್ಬರು ಗಂಡುಮಕ್ಕಳು ತಂದೆಯ ಉಪಟಳದಿಂದ ಬೇಸತ್ತು ಮನೆ ಬಿಟ್ಟು ಬೇರೆಡೆ ಜೀವನ ಸಾಗಿಸುತ್ತಿದ್ದರು. ಈ ಮಧ್ಯೆ ಮಾರುತಿ ಈಳಿಗೇರ್ ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೃತ್ಯದ ಬಳಿಕ ರಟಕಲ್ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular