
ರಣಬೀರ್ ಕಪೂರ್ ಅಲಿಯಾ ಭಟ್ ಸೇರಿದಂತೆ ಅಮಿತಾಬ್ ಬಚ್ಚನ್, ಮೌನಿ ರಾಯ್, ಸೌರವ್ ಗುಜ್ಜರ್, ಡಿಂಪಲ್ ಕಪಾಡಿಯಾ, ಹಾಗೂ ನಾಗಾರ್ಜುನ ಅಕ್ಕಿನೇನಿ ಈ ಚಿತ್ರದಲ್ಲಿ ತೆರೆ ಹಂಚಿಕೊಂಡಿದ್ದಾರೆ. ಸ್ಟಾರ್ ಸ್ಟುಡಿಯೋಸ್ ಹಾಗೂ ಧರ್ಮಾ ಪ್ರೊಡಕ್ಷನ್ ಬ್ಯಾನರ್ ನಡಿ ಕರಣ್ ಜೋಹರ್, ರಣಬೀರ್ ಕಪೂರ್, ನಮಿತಾ ಮಲೋತ್ರಾ, ಹಾಗೂ ಅಪೂರ್ವ ಮೆಹ್ತಾ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಆ್ಯಕ್ಷನ್ ಕಥಾಹಂದರ ಹೊಂದಿರುವ ಈ ಸಿನಿಮಾವನ್ನು ಸುಮಾರು 400 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.

