![](https://kannadadunia.com/wp-content/uploads/2023/06/dk-shivakumar16465625671647102728.jpg)
ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪಂಚಾಯಿತಿ ಮಟ್ಟದಲ್ಲಿ ಎರಡು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಮಾಡುವ ಗುರಿ ಹೊಂದಿದ್ದು, ಮೊದಲ ವರ್ಷ 5,00 ಶಾಲೆಗಳ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷದ ಮೊದಲನೇ ವಾರವೇ ಎಲ್ಲಾ ಸಿಎಸ್ ಆರ್ ಕಂಪನಿಗಳನ್ನು ಕರೆದು ಅವರಿಗೆ ಪಬ್ಲಿಕ್ ಶಾಲೆಗಳ ನಿರ್ಮಾಣ ಯೋಜನೆಗಳನ್ನು ನೀಡುತ್ತೇವೆ. ಪ್ರತಿ ಶಾಲೆಯ ಮೂಲಭೂತ ಸೌಕರ್ಯಕ್ಕೆ ಕನಿಷ್ಠ 4 ಕೋಟಿಯಿಂದ 7 ಕೋಟಿ ರೂ.ವರೆಗೆ ವೆಚ್ಚವಾಗಲಿದೆ ಎಂದು ಹೇಳಿದ್ದಾರೆ.
ಶಾಲೆ ನಿರ್ಮಾಣಕ್ಕೆ ಬೇಕಾದ ಕನಿಷ್ಠ ಎರಡು ಎಕರೆಯಿಂದ ಮೂರ್ನಾಲ್ಕು ಎಕರೆಯಷ್ಟು ಜಾಗವನ್ನು ಸರ್ಕಾರವೇ ನೀಡಲಿದ್ದು, ಅಲ್ಲಿ ಈ ಸಂಸ್ಥೆಗಳು ಶಾಲೆಗಳನ್ನು ನಿರ್ಮಿಸಲಿವೆ. ಶಾಲೆಯಲ್ಲಿ ಗ್ರಂಥಾಲಯ, ತರಗತಿ, ಪ್ರಯೋಗಾಲಯ, ಶೌಚಾಲಯಯ ಸೇರಿ ಎಲ್ಲಾ ಮೂಲ ಸೌಕರ್ಯದ ಯೋಜನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.