![](https://kannadadunia.com/wp-content/uploads/2023/01/Karnataka-Hijab-ban-We-are-not-interpreters-of-Quran-says-SC.jpg)
ಬೆಂಗಳೂರು: ಹಿಜಾಬ್ ನಿಷೇಧ ಆದೇಶ ಹಿಂಪಡೆಯುವ ಸರ್ಕಾರದ ನಿರ್ಧಾರಕ್ಕೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಮುಸ್ಲಿಂ ಸಮುದಾಯದ ಓಲೈಕೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣ ಬಾಕಿ ಇರುವಾಗಲೇ ಈ ನಿರ್ಧಾರ ಕೈಗೊಂಡಿದೆ. ಕೋರ್ಟ್ ಗೆ ಅಗೌರವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಹಿಂದೂ ಜನ ಜಾಗೃತಿ ಸಮಿತಿಯ ವಕ್ತಾರ ಮೋಹನ್ ಗೌಡ ಹೇಳಿದ್ದಾರೆ.
ಶಾಲೆಗಳಲ್ಲಿ ಮತ್ತೆ ಧರ್ಮದಂಗಲ್ ಗೆ ರಾಜ್ಯ ಸರ್ಕಾರ ಕಾರಣವಾಗಿದೆ. ಕರ್ನಾಟಕವನ್ನು ಟಿಪ್ಪು ಸುಲ್ತಾನ್ ರಾಜ್ಯವನ್ನಾಗಿ ಮಾಡುತ್ತಿದ್ದಾರೆ. ಶಾಲೆಗಳಲ್ಲಿ ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ಕೊಟ್ಟಿದ್ದಾರೆ. ಅದೇ ರೀತಿ ಕೇಸರಿ ಶಾಲು ಹಾಕುವುದಕ್ಕೆ ಸರ್ಕಾರ ಅವಕಾಶ ಕೊಡುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.
ಮುಸ್ಲಿಮರ ತುಷ್ಟೀಕರಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಸೌದಿ ಅರೇಬಿಯಾ ಸರ್ಕಾರ ಅಲ್ಲಿ ಸಮವಸ್ತ್ರಕ್ಕೆ ಅವಕಾಶ ನೀಡಿದೆ. ಆದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಜಾಬ್ ಗೆ ಅವಕಾಶ ಕೊಟ್ಟಿದೆ ಎಂದು ಮೋಹನ್ ಗೌಡ ವಾಗ್ದಾಳಿ ನಡೆಸಿದ್ದಾರೆ.