![](https://kannadadunia.com/wp-content/uploads/2023/05/application-web-780x405-1-1.jpg)
ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಜಿಲ್ಲಾ ವಲಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆ:
ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನು ಕೃಷಿಕರು ಮೀನು ಕೃಷಿ ಕೊಳ ನಿರ್ಮಾಣ ಮಾಡಲು ರೂ.4.40 ಲಕ್ಷಗಳ (ಒಂದು ಹೆಕ್ಟೇರ್ ಕೊಳಕ್ಕೆ) ಸಹಾಯಧನ ನೀಡಲಾಗುವುದು.
ಅರ್ಹ ಅರ್ಜಿದಾರರು ಅಗತ್ಯ ದಾಖಲೆಗಳೊಡನೆ ವೆಬ್ ಸೈಟ್ ವಿಳಾಸ https://ballari.nic.in/ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು ಅಥವಾ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಬಳ್ಳಾರಿ ಕಚೇರಿಯ ಮುಖಾಂತರ ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಡಿ.28 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕುಗಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೊ.8970754167 ಮತ್ತು ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿ ಅಥವಾ ಮೊ.9449593156ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.