BIG NEWS: ಶಿಕ್ಷಣ ಕಲುಷಿತಗೊಳಿಸುವ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ; ಬಿ.ವೈ.ವಿಜಯೇಂದ್ರ ಕಿಡಿ

ನವದೆಹಲಿ: ಸಿಎಂ ಸಿದ್ದರಾಮಯ್ಯ ಹಿಜಾಬ್ ಗೆ ಮತ್ತೆ ಅವಕಾಶ ಕೊಡುತ್ತೇವೆ ಎಂದು ಹೇಳಿದ್ದಾರೆ. ಈ ಮೂಲಕ ಶಿಕ್ಷಣವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಶಾಲಾ ವಿದ್ಯಾರ್ಥಿಗಳನ್ನು ರಾಜಕೀಯದಿಂದ ದೂರ ಇಡಬೇಕಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರದ ನಡೆಯನ್ನು ಬಿಜೆಪಿ ಖಂಡಿಸುತ್ತದೆ. ಶೇ.50ಕ್ಕಿಂತ ಹೆಚ್ಚು ಅಲ್ಪಸಂಖ್ಯಾತರು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇದಕ್ಕೆ ಕಾಂಗ್ರೆಸ್ ಕಾರಣವಲ್ವಾ? ಅಲ್ಪಸಂಖ್ಯಾತರನ್ನು ಕೇವಲ ವೋಟ್ ಬ್ಯಾಂಕ್ ಗೆ ಬಳಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read