![](https://kannadadunia.com/wp-content/uploads/2023/12/Reservation.jpg)
ಬೆಂಗಳೂರೂ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿಗೂ ಮೀಸಲಾತಿ ವ್ಯವಸ್ಥೆ ಜಾರಿಗೊಳಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಮೀಸಲಾತಿ ನಿಗದಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಮೀಸಲು ಸೇರಿ ರಾಜ್ಯ ಸರ್ಕಾರದ ಹಾಲಿ ಮೀಸಲು ನೀತಿ ಈ ಹೊರಗುತ್ತಿದೆ ಸೇವೆಗೆ ಅನ್ವಯವಾಗಲಿದೆ ತಿಳಿಸಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 449 ಹುದ್ದೆಗಳ ನೇಮಕಾತಿಗೆ ಈ ನಿರ್ಧಾರ ಜಾರಿಗೆ ಬರಲಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು 347 ಗ್ರೂಪ್ ಡಿ ನೌಕರರು, 102 ಡಾಟಾ ಎಂಟ್ರಿ ಆಪರೇಟರ್ ಗಳು ಸೇರಿ 449 ಹುದ್ದೆಗಳ ಸೇವೆಯನ್ನು ಹೊರಗುತ್ತಿಗೆ ಆಧಾರದಲ್ಲಿ ಪಡೆಯಲು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಮೀಸಲಾತಿ ಸೇರಿ ರಾಜ್ಯ ಸರ್ಕಾರದ ಹಾಲಿ ಮೀಸಲು ನಿಯಮ ಈ ಹೊರಗುತ್ತಿಗೆ ಸೇವೆಗೆ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.