ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಸ್ಪರ್ಧಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಸವಾಲು ಹಾಕಿದೆ.
ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಅಗ್ನಿಮಿತ್ರ ಪಾಲ್ ಅವರು ಪ್ರಧಾನಿಯಾಗಲು ಬಯಸಿದರೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ವಿರುದ್ಧ ನಿಲ್ಲುವಂತೆ ಮಮತಾ ಬ್ಯಾನರ್ಜಿ ಅವರನ್ನು ಒತ್ತಾಯಿಸಿದ್ದಾರೆ.
ಮಮತಾ ಬ್ಯಾನರ್ಜಿ ವಾರಣಾಸಿಯಿಂದ ಲೋಕಸಭಾ ಚುನಾವಣೆಯಲ್ಲಿ ಏಕೆ ಸ್ಪರ್ಧಿಸುವುದಿಲ್ಲ? ಮಮತಾ ಬ್ಯಾನರ್ಜಿಗೆ ಧೈರ್ಯವಿದ್ದರೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬದಲಿಗೆ ಸ್ಪರ್ಧಿಸಲಿ ನೀವು ಪ್ರಧಾನಿಯಾಗಲು ಬಯಸುತ್ತೀರಿ, ಅಲ್ಲವೇ? ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿ ಗೆಲ್ಲಿ ಎಂದು ಸವಾಲು ಹಾಕಿದ್ದಾರೆ.