ಧಾರವಾಡ : ‘ಮದ್ಯಪ್ರಿಯ’ ರ ಬೇಡಿಕೆಗಳು ನ್ಯಾಯಯುತವಾಗಿದೆ, ಇದು ಚರ್ಚಿಸುವ ವಿಚಾರ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್ ಬೆಳಗಾವಿಯಲ್ಲಿ ಮದ್ಯಪ್ರಿಯರು ಒಂದಷ್ಟು ಬೇಡಿಕೆಗಳನ್ನಿಟ್ಟಿದ್ದಾರೆ, ಮದ್ಯದ ಬಾಟಲಿಯ ಮೇಲೆ ವಿಮೆ ಮಾಡುವಂತೆ ಹೇಳಿದ್ದಾರೆ, ಇದು ಚರ್ಚಿಸುವ ವಿಚಾರ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಮದ್ಯ ಪ್ರಿಯರ ಬೇಡಿಕೆ ಬಗ್ಗೆ ಸಂಬಂಧಪಟ್ಟ ಇಲಾಖೆ ಜೊತೆ ಚರ್ಚೆ ಮಾಡುತ್ತೇನೆ, ಬೇಡಿಕೆಯ ಬಗ್ಗೆ ಚರ್ಚಿಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಇತ್ತೀಚೆಗೆ ಬೆಳಗಾವಿ ಸುವರ್ಣಸೌಧದದ ಬಳಿ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮದ್ಯ ಪ್ರಿಯರು ಪ್ರತಿಭಟನೆ ನಡೆಸಿದ್ದರು. ಮದ್ಯಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು, ‘ಕುಡುಕ’ ಎಂಬ ಪದ ನಿಷೇಧಿಸಿ ‘ಮದ್ಯಪ್ರಿಯ’ ಎಂದು ಸೇರಿಸಬೇಕು. ಲಿವರ್ ಸಮಸ್ಯೆಯಿಂದ ಬಳಲುವವರಿಗೆ ಚಿಕಿತ್ಸೆ ಕೊಡಿಸಬೇಕು. ಒಬ್ಬರಿಗೆ ಒಂದು ಕ್ವಾರ್ಟರ್ ನಿಗದಿ, ಬಾರ್ ಗಳಲ್ಲಿ ಆಂಬುಲೆನ್ಸ್ ವ್ಯವಸ್ಥೆ, ಸ್ವಚ್ಛತೆ, ಮದ್ಯಪ್ರಿಯರ ಭವನ ಸ್ಥಾಪನೆ, ಡಿಸೆಂಬರ್ 31 ಮದ್ಯಪಾನ ಪ್ರಿಯರ ದಿನ ಎಂದು ಘೋಷಿಸಬೇಕು. ಮದ್ಯಸೇವನೆಯಿಂದ ಮೃತಪಟ್ಟವರಿಗೆ 10 ಲಕ್ಷ ಪರಿಹಾರ ಘೋಷಣೆ, ಮದ್ಯಪ್ರಿಯರ ಕುಟುಂಬದವರನ್ನು ವಿವಾಹವಾದರೆ 2 ಲಕ್ಷ ಪ್ರೋತ್ಸಾಹ ಧನ ನೀಡಬೇಕು ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟಿದ್ದರು.