HomeKarnatakaKarnataka Covid-19 Update : ರಾಜ್ಯದಲ್ಲಿ ಇಂದು 104 ಮಂದಿಗೆ ಕೊರೊನಾ ಸೋಂಕು ಧೃಡ,...

Karnataka Covid-19 Update : ರಾಜ್ಯದಲ್ಲಿ ಇಂದು 104 ಮಂದಿಗೆ ಕೊರೊನಾ ಸೋಂಕು ಧೃಡ, ಸೋಂಕಿತರ ಸಂಖ್ಯೆ 271 ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಇಂದು 104 ಜನರಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದು 104 ಜನರಿಗೆ ಕೊರೊನಾ ಸೋಂಕು ಧೃಡವಾಗಿದೆ. ಬೆಂಗಳೂರಿನಲ್ಲಿ ಇಂದು 85 ಜನರಿಗೆ ಸೋಂಕು ತಗುಲಿದೆ.   ಈ ಮೂಲಕ  ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 234 ಕ್ಕೆ ಏರಿದೆ.   ಒಟ್ಟಾರೆ   ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 271 ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 8 ಮಂದಿ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.   ರಾಜ್ಯದಲ್ಲಿ ಇಂದು ಯಾವುದೇ ಕೋವಿಡ್ ಸಾವಿನ ಬಗ್ಗೆ ವರದಿಯಾಗಿಲ್ಲ, ರಾಜ್ಯದಲ್ಲಿ ಸದ್ಯ ಪಾಸಿಟಿವಿಟಿ ದರ ಶೇ.5.93 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular