HomeAutoBIG NEWS: ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜನಕ್ಕೆ ಸರ್ಕಾರದಿಂದ 5,228 ಕೋಟಿ ರೂ. ಸಬ್ಸಿಡಿ

BIG NEWS: ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜನಕ್ಕೆ ಸರ್ಕಾರದಿಂದ 5,228 ಕೋಟಿ ರೂ. ಸಬ್ಸಿಡಿ

ನವದೆಹಲಿ: ಈ ವರ್ಷ ದೇಶದಲ್ಲಿ 11.53 ಲಕ್ಷ ಎಲೆಕ್ಟ್ರಿಕ್ ವಾಹನಗಳ ಬಳಕೆ ಪ್ರೋತ್ಸಾಹಿಸಲು ಸರ್ಕಾರ 5,228 ಕೋಟಿ ರೂಪಾಯಿ ಸಬ್ಸಿಡಿ ನೀಡಿದೆ.

7432 ಸಾರ್ವಜನಿಕ ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಪಿಎಸ್‌ಯು ಆಯಿಲ್ ಮಾರ್ಕೆಟಿಂಗ್ ಕಂಪನಿಗಳಿಗೆ ಸರ್ಕಾರ 800 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಪ್ರಸ್ತುತ ದೇಶದಲ್ಲಿ ಒಟ್ಟು 148 ಎಲೆಕ್ಟ್ರಾನಿಕ್ ವೆಹಿಕಲ್ಸ್ ಪಬ್ಲಿಕ್ ಚಾರ್ಜಿಂಗ್ ಸ್ಟೇಷನ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಭಾರೀ ಕೈಗಾರಿಕೆಗಳ ಸಚಿವಾಲಯ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶದಲ್ಲಿ ಸ್ವಚ್ಛ ಮತ್ತು ಹಸಿರು ಸಾರ್ವಜನಿಕ ಸಾರಿಗೆಯನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ವಾಹನ ಹೊರಸೂಸುವಿಕೆಯ ಸಮಸ್ಯೆಯನ್ನು ಪರಿಹರಿಸಲು ವೇಗದ ಅಡಾಪ್ಷನ್ ಮತ್ತು ಮ್ಯಾನುಫ್ಯಾಕ್ಚರಿಂಗ್ ಎಲೆಕ್ಟ್ರಿಕ್ ವೆಹಿಕಲ್ಸ್(FAME-II) ಯೋಜನೆಯ II ನೇ ಹಂತವನ್ನು ಜಾರಿಗೊಳಿಸುತ್ತಿದೆ ಎಂದು ಸಚಿವಾಲಯ ಹೇಳಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular