HomeKarnatakaBIG NEWS : 'ಕನ್ನಡ ನಾಮಫಲಕ' ಅಳವಡಿಕೆಗೆ ಫೆ.28 ಕೊನೇ ದಿನ, ಗಡುವು ಮೀರಿದ್ರೆ ಕಾನೂನು...

BIG NEWS : ‘ಕನ್ನಡ ನಾಮಫಲಕ’ ಅಳವಡಿಕೆಗೆ ಫೆ.28 ಕೊನೇ ದಿನ, ಗಡುವು ಮೀರಿದ್ರೆ ಕಾನೂನು ಕ್ರಮ : BBMP

ಬೆಂಗಳೂರು : ಫೆ. 28 ರೊಳಗೆ ನಾಮಫಲಕದಲ್ಲಿ ಶೇ. 60 ರಷ್ಟು ‘ಕನ್ನಡ ಭಾಷೆ’ ಬಳಕೆ ಕಡ್ಡಾಯ ಎಂದು BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಮೆಟ್ರೋ, ನಿಲ್ದಾಣ, ಶಾಲೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಸೂಚಿಸಲಾಗಿತ್ತು. ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ಬಳಕೆಗೆ ಗಡುವು ನೀಡಲಾಗಿದೆ.

ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ತುಷಾರ್ ಗಿರಿನಾಥ್ ಮುಂದಿನ ಫೆಬ್ರವರಿ 28 ರೊಳಗಾಗಿ ಶೇಕಡಾ 60 ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಎಂದರು. ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು, ಮಾಲ್ ಸೇರಿದಂತೆ ಇನ್ನಿತರೆ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವ ಸಂಬಂಧ ಎಲ್ಲಾ ವಲಯ ಆಯುಕ್ತರ ಜೊತೆ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗುವುದೆಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಸ್ತೆಗಳಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳನ್ನು ವಲಯವಾರು ಸರ್ವೆ ಮಾಡಿಸಲಾಗುತ್ತದೆ, ಸರ್ವೇಯ ನಂತರ ಶೇ. 60 ರಷ್ಟು ಕನ್ನಡ ಭಾಷೆ ಬಳಸದ ಮಳಿಗೆಗಳಿಗೆ ನೋಟೀಸ್ ನೀಡಲಾಗುತ್ತದೆ . ನೋಟೀಸ್ ನಿಡಿದ ಬಳಿಕ ಫೆಬ್ರವರಿ 28 ರವರೆಗೆ ಸಮಯಾವಕಾಶ ನೀಡಿ ಕಡ್ಡಾಯವಾಗಿ ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಿ ಅನುಷ್ಠಾನಗೊಳಿಸಿ ಆಯಾ ವಲಯ ಆಯುಕ್ತರಿಗೆ ಅನುಪಾಲನೆ ಸಲ್ಲಿಸಬೇಕೆಂದು ಸೂಚಿಸಲಾಗುವುದೆಂದು ತಿಳಿಸಿದರು.

ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಹಾಕದೇ ಇರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಆದೇಶ ಹಾಗೂ ಪಾಲಿಕೆ ಸುತ್ತೋಲೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು. ಫೆಬ್ರವರಿ 28ರೊಳಗಾಗಿ ಕನ್ನಡ ನಾಮಫಲಕಗಳನ್ನು ಅಳವಡಿಕೊಳ್ಳದ ಅಂಗಡಿ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಅದರಂತೆ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಬಳಸದ ಅಂಗಡಿ ಮುಂಗಟ್ಟುಗಳನ್ನು ಕಾನೂನಿನ ಪ್ರಕಾರ ಅಮಾನತಿನಲ್ಲಿಟ್ಟು ನಂತರ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ನಗರದಲ್ಲಿ ಬರುವ ದೊಡ್ಡ ದೊಡ್ಡ ಮಾಲ್ ಗಳ ಜೊತೆ ಕೂಡಲೆ ಸಮಾಲೋಚನೆ ನಡೆಸಿ ಮಾಲ್ ಗಳಲ್ಲಿರುವ ಎಲ್ಲಾ ಮಳಿಗೆಗಳಲ್ಲಿ 15-20 ದಿನಗಳೊಳಗಾಗಿ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಳವಡಿಸಿಕೊಳ್ಳಬೇಕು. ಇಲ್ಲವಾದರೆ ಕಾನೂನು ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular