ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯ 2023-24 ನೇ ಸಾಲಿನ ವಿವಿಧ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸುವ ಅವಧಿ ಡಿ.31 ರವರೆಗೆ ವಿಸ್ತರಿಸಲಾಗಿದೆ.
ದ್ವಿತೀಯ ಹಾಗೂ ತೃತೀಯ ವರ್ಷದ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಸಿಎ ಸ್ನಾತಕ ಕೋರ್ಸುಗಳು ಮತ್ತು ಅಂತಿಮ ವರ್ಷದ ಸ್ನಾತಕೋತ್ತರ ಎಂಎ, ಎಂಕಾಂ, ಎಂಎಸ್ಸಿ, ಎಂಬಿಎ, ಎಂಸಿಜೆ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ ಬೋಧನಾಶುಲ್ಕದಲ್ಲಿ ಶೇ.15 ರಷ್ಟುವಿನಾಯಿತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮಲ್ಲೇಶ್ವರಂನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿರುವ ಕೆಎಸ್ಒಇಯು ಬೆಂಗಳೂರು ಮಹಿಳಾ ಪ್ರಾದೇಶಿಕ ಕೇಂದ್ರ ಕಚೇರಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.