ಬೆಂಗಳೂರು : ಬಿಬಿಎಂಪಿ ಶಾಲೆಗಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಣ ಇಲಾಖೆಗೆ ನೀಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಣ ನೀಡುವ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಗೆ ನೀಡಲಾಗುತ್ತಿದ್ದು, ಶಾಲೆಗಳ ಉನ್ನತೀಕರಣ, ಜಾಗ, ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲಾ ಮೂಲಸೌಕರ್ಯವನ್ನು ಪಾಲಿಕೆಯಿಂದಲೇ ನಿರ್ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಿಎಸ್ಆರ್ ನಿಧಿಯ ಮೂಲಕ ಪಂಚಾಯ್ತಿ ಮಟ್ಟದಲ್ಲಿ 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಮಾಡುವ ಗುರಿ ಸರ್ಕಾರದ ಮುಂದಿದೆ. ಮೊದಲ ವರ್ಷ 500 ಶಾಲೆಗಳ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ ಎಂದರು.