ಬೆಳಗಾವಿ: ದೂರು ನೀಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಠಾಣೆಯ ಪಿಎಸ್ ಐ ಓರ್ವರನ್ನು ಅಮಾನತುಮಾಡಲಾಗಿದೆ.
ಸಂಕೇಶ್ವರ ಪೊಲೀಸ್ ಠಾಣೆಯ ಪಿಎಸ್ ಐ ನರಸಿಂಹರಾಜು ಜೆ.ಡಿ ಅಮಾನತುಗೊಂಡವರು. ಕರ್ತವ್ಯ ಲೋಪ, ಅಶಿಸ್ತು, ದುರ್ನಡತೆ ಹಿನ್ನೆಲೆಯಲ್ಲಿ ಬೆಳಗಾವಿ ಎಸ್ ಪಿ, ನರಸಿಂಹರಾಜು ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕೆಲ ದಿನಗಳ ಹಿಂದೆ ಮಹಿಳೆಯೊಬ್ಬರು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ಧ ದೂರು ನೀಡಲು ಬಂದಿದ್ದರು. ಈ ವೇಳೆ ಈ ವೇಳೆ ಪಿಎಸ್ ಐ ನರಸಿಂಹರಾಜು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ, ಆಕೆಯ ಮೊಬೈಲ್ ನಂಬರ್ ಪಡೆದು ಕಿರುಕುಳ ನೀಡುತ್ತಿದ್ದ.
ಇದರಿಂದ ನೊಂದ ಮಹಿಳೆ ಎಸ್ ಪಿ ಅವರಿಗೆ ದೂರು ನೀಡಿದ್ದರು. ಇದೀಗ ಪಿಎಸ್ ಐ ನರಸಿಂಹ ರಾಜು ಅವರನ್ನು ಸಸ್ಪೆಂಡ್ ಮಾಡಲಾಗಿದೆ.