BIG NEWS : ನಾಮಫಲಕದಲ್ಲಿ ‘ಕನ್ನಡ’ ಬಳಕೆ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಕಟ್ಟು ನಿಟ್ಟಿನ ಕ್ರಮ-CM ಸಿದ್ದರಾಮಯ್ಯ

ಬೆಂಗಳೂರು : ನಾಮಫಲಕದಲ್ಲಿ ‘ಕನ್ನಡ’ ಬಳಕೆ ಕಡ್ಡಾಯವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ.

ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ.ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

https://twitter.com/siddaramaiah/status/1739192631564075425

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read