HomeCrimeBREAKING: ಶಿವಮೊಗ್ಗದಲ್ಲಿ ಹಾಡಹಗಲೇ ಯುವಕನಿಗೆ ಚಾಕು ಇರಿತ

BREAKING: ಶಿವಮೊಗ್ಗದಲ್ಲಿ ಹಾಡಹಗಲೇ ಯುವಕನಿಗೆ ಚಾಕು ಇರಿತ

ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ಬಳಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಶಿ ಗಾಯಗೊಂಡ ಯುವಕ ಎಂದು ಹೇಳಲಾಗಿದೆ.

ಆರ್ಕೆಸ್ಟ್ರಾ ವಿಚಾರಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಮಂಜುನಾಥ ಯಾನೆ ಒಲಂಗ ಹಾಗೂ ನೇಪಾಳಿ ತಂಡದವರು ಕೃತ್ಯವೆಸಗಿದ್ದಾರೆ ಎನ್ನಲಾಗಿದ್ದು, ಸ್ಥಳಕ್ಕೆ ಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular