HomeKarnatakaಮತ್ತೆ ನೈತಿಕ ಪೊಲೀಸ್ ಗಿರಿ: ದೇವಾಲಯ ಬಳಿ ಸುತ್ತಾಡುತ್ತಿದ್ದ ಅನ್ಯಕೋಮಿನ ಯುವಕರು, ಯುವತಿಯರನ್ನು ತಡೆದ ಹಿಂದೂ...

ಮತ್ತೆ ನೈತಿಕ ಪೊಲೀಸ್ ಗಿರಿ: ದೇವಾಲಯ ಬಳಿ ಸುತ್ತಾಡುತ್ತಿದ್ದ ಅನ್ಯಕೋಮಿನ ಯುವಕರು, ಯುವತಿಯರನ್ನು ತಡೆದ ಹಿಂದೂ ಕಾರ್ಯಕರ್ತರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಸೋಮೇಶ್ವರ ದೇವಾಲಯದ ಬಳಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಭಿನ್ನ ಕೋಮಿನ ವಿದ್ಯಾರ್ಥಿಗಳನ್ನು ಹಿಂದೂ ಕಾರ್ಯಕರ್ತರು ತಡೆದಿದ್ದಾರೆ.

ಉಳ್ಳಾಲದ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಕೇರಳ ಮೂಲದ ನಾಲ್ವರು ವಿದ್ಯಾರ್ಥಿಗಳು ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸುತ್ತಮುತ್ತ ಓಡಾಡುತ್ತಿದ್ದರು. ಇಬ್ಬರು ಹಿಂದೂ ಯುವತಿಯರು, ಓರ್ವ ಹಿಂದೂ ಯುವಕ, ಓರ್ವ ಮುಸ್ಲಿಂ ಯುವಕ ಸೋಮೇಶ್ವರ ದೇವಸ್ಥಾನದ ಬಳಿ ಸುತ್ತಾಡುತ್ತಿದ್ದರು. ಮುಸ್ಲಿಂ ಯುವಕ ಹಣೆಗೆ ಗಂಧ ಹಚ್ಚಿಕೊಂಡಿರುವುದನ್ನು ಗಮನಿಸಿದ ಹಿಂದೂ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನ್ಯಕೋಮಿನ ಯುವಕ, ಯುವತಿಯರು ಒಟ್ಟಿಗೆ ಬಂದಿರುವುದನ್ನು ಗಮನಿಸಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವಕರು, ಯುವತಿಯರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಕಳುಹಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular