ನವದೆಹಲಿ: ಈಗ ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ 295 – 335 ಸ್ಥಾನ ಗಳಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 165 – 205 ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ಎಬಿಪಿ ನ್ಯೂಸ್- ಸಿ ವೋಟರ್ ನಡೆಸಿದ ಸಮೀಕ್ಷೆಯಲ್ಲಿ ತಿಳಿದು ಬಂದಿದೆ.
ಎನ್.ಡಿ.ಎ. ಶೇ. 42 ರಷ್ಟು ಮತ ಮತ ಪಡೆದು 295 – 335 ಸ್ಥಾನ ಗಳಿಸುವ ಸಾಧ್ಯತೆ ಇದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟ 353 ಸ್ಥಾನ ಪಡೆದುಕೊಂಡಿತ್ತು. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಶೇಕಡ 38 ರಷ್ಟು ಮತ ಗಳಿಸಿ 165 -205 ಸ್ಥಾನ ಪಡೆಯಬಹುದು. ಇತರರು ಶೇಕಡ 20ರಷ್ಟು ಮತಗಳೊಂದಿಗೆ 35 – 65 ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಸಮೀಕ್ಷೆ ತಿಳಿಸಿದೆ.
ಉತ್ತರ ಪ್ರದೇಶದ 80 ಕ್ಷೇತ್ರಗಳಲ್ಲಿ ಬಿಜೆಪಿ 73 ರಿಂದ 75 ಸ್ಥಾನ ಗಳಿಸುವ ಸಾಧ್ಯತೆ ಇದೆ. ದೇಶದ ಮುಂದಿನ ಪ್ರಧಾನಿ ಯಾರಾಗಬೇಕು ಎನ್ನುವ ಪ್ರಶ್ನೆಗೆ ಶೇಕಡ 58.6 ರಷ್ಟು ಮಂದಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು ಹೇಳಿದ್ದಾರೆ. ಶೇಕಡ 32ರಷ್ಟು ಮಂದಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿಯಾಗಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.