ಬೆಂಗಳೂರು : . ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದೆ.ಎಲ್ಲಾ ಅರ್ಹ ಪಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಆದರೂ ಇನ್ನೂ ಕೂಡ ಹಲವು ಮಹಿಳೆಯ ಖಾತೆಗೆ ಹಣ ಬಂದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಡಿ.27 ರಿಂದ ಅಂದರೆ ನಾಳೆಯಿಂದ ಗ್ರಾಮ ಮಟ್ಟದ ಕ್ಯಾಂಪ್ ನಡೆಸಲು ನಿರ್ಧರಿಸಲಾಗಿದೆ.
‘ಗೃಹಲಕ್ಷ್ಮಿ’ ಯೋಜನೆಗಳ ಸಮಸ್ಯೆ ನಿವಾರಿಸಲು ಸರ್ಕಾರ ಮುಂದಾಗಿದ್ದು , ಡಿ.27 ರಿಂದ ಡಿ.29 ರವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್ ನಡೆಸಲಾಗುತ್ತಿದೆ. ಎಲ್ಲಾ ಗ್ರಾಮಗಳಲ್ಲಿ ನಾಳೆಯಿಂದ ಶಿಬಿರ ನಡೆಯಲಿದ್ದು, ಯಜಮಾನಿಯರಿಗೆ ಸ್ಥಳದಲ್ಲೇ ಗೃಹಲಕ್ಷ್ಮಿ ಸಮಸ್ಯೆಗೆ ಪರಿಹಾರ ಸಿಗಲಿದೆ.
ಪಿಡಿಒಗಳ ನೇತೃತ್ವದಲ್ಲಿ ಕ್ಯಾಂಪ್ ನಡೆಯಲಿದ್ದು, ಈ ಕ್ಯಾಂಪ್ ನಲ್ಲಿ ಫಲಾನುಭವಿಗಳ ಸಮಸ್ಯೆ ಸರಿಪಡಿಸಲಾಗುತ್ತದೆ. ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಡಿ.27 ರಿಂದ ಡಿ. 29 ರವರೆಗೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಕ್ಯಾಂಪ್ ಆಯೋಜಿಸುವಂತೆ ಸೂಚನೆ ನೀಡಲಾಗಿದೆ. ಮಹಿಳೆಯರು ತಮ್ಮ ತಮ್ಮ ಗ್ರಾಮದಲ್ಲಿ ನಡೆಯಲಿರುವ ಕ್ಯಾಂಪ್ ಗೆ ಭೇಟಿ ನೀಡಿ ಗೃಹಲಕ್ಷ್ಮಿ ಯೋಜನೆಯಲ್ಲಾದ ಗೊಂದಲ, ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದು.
ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು.ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡುವುದು.ಇ-ಕೆವೈಸಿ ಅಪ್ಡೇಟ್ ಮಾಡುವುದು.ಗೃಹಲಕ್ಷ್ಮೀ ಅರ್ಜಿಯ ಸ್ಥಿತಿ ಪರಿಶೀಲಿಸುವುದು. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸುವುದು ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.