HomeKarnatakaಅಲ್ಪಸಂಖ್ಯಾತ ವಿದ್ಯಾರ್ಥಿಗಳೇ ಗಮನಿಸಿ : ವಿದೇಶಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

ಅಲ್ಪಸಂಖ್ಯಾತ ವಿದ್ಯಾರ್ಥಿಗಳೇ ಗಮನಿಸಿ : ವಿದೇಶಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

ಪ್ರಸಕ್ತ(2023-24) ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್, 31 ರವರೆಗೆ ಅವಧಿ ವಿಸ್ತರಿಸಲಾಗಿದೆ. ಪೋಷಕರ ವಾರ್ಷಿಕ ಆದಾಯ ರೂ.6 ಲಕ್ಷಗಳ ಒಳಗಿದ್ದಲ್ಲಿ 2 ವರ್ಷಗಳ ಕೋರ್ಸ್ಗೆ ಗರಿಷ್ಠ ರೂ.20 ಲಕ್ಷ ಹಾಗೂ ರೂ.6 ಲಕ್ಷದಿಂದ ರೂ.15 ಲಕ್ಷಗಳ ಒಳಗಿದ್ದಲ್ಲಿ 2 ವರ್ಷಗಳ ಕೋರ್ಸ್ಗೆ ರೂ.10 ಲಕ್ಷಗಳ ಗರಿಷ್ಠ ಮಿತಿಯಲ್ಲಿ ವಿದ್ಯಾರ್ಥಿ ವೇತನ ಪಾವತಿಸಲಾಗುವುದು. ಇಲಾಖಾ ವೆಬ್ಸೈಟ್ https://dom.karnataka.gov.in ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ.

ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಹಾಗೂ ಕಚೇರಿ ದೂ.ಸಂ.08272-225528, ಮಾಹಿತಿ ಕೇಂದ್ರ, ಮಡಿಕೇರಿ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular