HomeKarnatakaBREAKING : ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಗೈಡ್ ಲೈನ್ಸ್ ಇಲ್ಲ :...

BREAKING : ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಗೈಡ್ ಲೈನ್ಸ್ ಇಲ್ಲ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು :ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಪ್ರತ್ಯೇಕ ಮಾರ್ಗಸೂಚಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು.

ಇಂದು ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಪ್ರತ್ಯೇಕ ಮಾರ್ಗಸೂಚಿ ಇಲ್ಲ. ಹಾಗಂತ ಎಚ್ಚರ ವಹಿಸದೇ ಇರಬೇಡಿ. ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿಲ್ಲ, ಜನರು ಸ್ವಯಂ ಪ್ರೇರಿತವಾಗಿ ಮಾಸ್ಕ್ ಧರಿಸಬೇಕು.

ಇದುವರೆಗೆ ಕೊರೊನಾ ಸೋಂಕಿಗೆ 7 ಮಂದಿ ಮೃತಪಟ್ಟಿದ್ದಾರೆ, 36   ಜನರಿಗೆ  ಜೆಎನ್ 1 ಸೋಂಕು ತಗುಲಿರುವುದು ಧೃಡವಾಗಿದೆ. ಮಕ್ಕಳಿಗೆ ಶೀತ, ಜ್ವರ ಬಂದರೆ ಶಾಲೆಗಳಿಗೆ ಕಳುಹಿಸಬೇಡಿ. ನ್ಯೂ ಇಯರ್ ಗೆ ಯಾವುದೇ ಗೈಡ್ ಲೈನ್ಸ್ ಇರುವುದಿಲ್ಲ. ಕೋವಿಡ್ ಸೋಂಕಿತರು 1 ವಾರ ಮನೆಯಲ್ಲಿರಬೇಕು. ಕೊರೊನಾ ಸೋಂಕು ತಗುಲಿದರೆ ಉದ್ಯೋಗಿಗಳಿಗೆ ಕಡ್ಡಾಯವಾಗಿ ರಜೆ ಕೊಡಬೇಕು ಎಂಬ ಆದೇಶವನ್ನು ಶೀಘ್ರವೇ ಹೊರಡಿಸಲಾಗುತ್ತದೆ. ಕೊರೊನಾ ಸೋಂಕಿತರ ಮೇಲೆ ಆರೋಗ್ಯ ಇಲಾಖೆ ಅಧಿಕಾರಗಳು ತೀವ್ರ ನಿಗಾ ವಹಿಸಿದ್ದಾರೆ. ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಐಸಿಯು, ಬೆಡ್ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular