ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಒಂದೇ ಸೂರಿನಡಿಯಲ್ಲಿ ಎಲ್ಲಾ ಇಲಾಖೆಗಳ ಆಯ್ದ ಸರ್ಕಾರದ ಸೇವೆಗಳನ್ನು ನಗರ ಸ್ಥಳೀಯ ಸಂಸ್ಥೆಯ ಭಾಗದ ನಾಗರಿಕರಿಗೆ ನೀಡುವ ಸದುದ್ದೇಶದಿಂದ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ ಮಡಿಕೇರಿ ನಗರಸಭೆ(ಸಿಎಂಸಿ) ಮತ್ತು ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ತಲಾ ಒಂದು ಕೇಂದ್ರಗಳನ್ನು ತೆರೆಯಲು ಅವಕಾಶವಿದೆ. ಆಸಕ್ತ ಪ್ರಾಂಚೈಸಿಗಳು https://www.karnatakaone.gov.in/Public/FranchiseeRegister ಲಿಂಕ್ನ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಹಾಯವಾಣಿ ಸಂಖ್ಯೆ 080-49203888/ 8904085030 ಇ-ಮೇಲ್ onehelpdesk@karnataka.gov.in ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ತಿಳಿಸಿದ್ದಾರೆ.