ಬೆಂಗಳೂರು : ಮಕ್ಕಳಲ್ಲಿ ವೇಗವಾಗಿ ರೋಗ ಹರಡುವ ಸಾಧ್ಯತೆ ಇರುವುದರಿಂದ ಜ್ವರ, ನೆಗಡಿ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬೇಡಿ. ಮನೆಯಲ್ಲೇ ಸೂಕ್ತ ಆರೈಕೆ ಮಾಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಕ್ಕಳಲ್ಲಿ ವೇಗವಾಗಿ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜ್ವರ, ನೆಗಡಿ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಾರದು. ಮನೆಯಲ್ಲೇ ಸೂಕ್ತ ಆರೈಕೆಗೆ ಮಾಡಬೇಕು ಎಂಬ ಮಾರ್ಗಸೂಚಿ ಹೊರಡಿಸಲು ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಣಯಿಸಲಾಯಿತು.
ಕೋವಿಡ್ ಪಾಸಿಟಿವ್ ಆದವರು ಕಡ್ಡಾಯವಾಗಿ ಒಂದು ವಾರಗಳ ಕಾಲ ʻಹೋಮ್ ಐಸೊಲೇಷನ್ʼನಲ್ಲಿ (ಮನೆಯಲ್ಲಿ ಪ್ರತ್ಯೇಕವಾಗಿ ) ಇರಬೇಕು.
ʻಹೋಮ್ ಐಸೊಲೇಷನ್ʼನಲ್ಲಿ ಇರುವ ಸರ್ಕಾರಿ ಅಥವಾ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಒಂದು ವಾರಗಳ ರಜೆ ಹಾಗೂ ಐಸಿಯು ಅಥವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಬಾಧಿತರಿಗೆ ಸಂಪೂರ್ಣ ಗುಣಮುಖರಾಗುವವರೆಗೆ ರಜೆ ಕೊಡಿಸುವ ಕುರಿತು ಸದ್ಯದಲ್ಲೇ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.