ತುಮಕೂರು: ತೆಂಗು ಬೆಳೆಗಾರರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ನಾಫೆಡ್ ಮೂಲಕ ಕೊಬ್ಬರಿ ಖರೀದಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಜನವರಿ 2ನೇ ವಾರದಲ್ಲಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿದೆ.
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಹಾಗೂ ಆಹಾರ ಸಂಸ್ಕರಣೆ ಉದ್ಯಮಗಳ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಅವರು ತುಮಕೂರಿನಲ್ಲಿ ಕೊಬ್ಬರಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲಿದ್ದಾರೆ. ಶೀಘ್ರವೇ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರ ಕ್ವಿಂಟಲ್ ಕೊಬ್ಬರಿಗೆ 11,750 ರೂ. ಬೆಂಬಲ ಬೆಲೆ ಘೋಷಿಸಿದೆ. ರಾಜ್ಯ ಸರ್ಕಾರ ಈ ಹಿಂದೆ 1500 ರೂಪಾಯಿ ಪ್ರೋತ್ಸಾಹ ಧನ ಘೋಷಿಸಿದ್ದು, ಹೆಚ್ಚುವರಿಯಾಗಿ 250 ರೂ. ನೀಡುವುದಾಗಿ ಹೇಳಿದೆ. ಕ್ವಿಂಟಲ್ ಗೆ ಒಟ್ಟು 13,500 ರೂ. ದರದಲ್ಲಿ ಕೊಬ್ಬರಿ ಖರೀದಿಸಲಾಗುವುದು ಎಂದು ಹೇಳಲಾಗಿದೆ.