ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಇಒ ಹೇಮಂತ್ ರಾಜ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
ಅನುಕಂಪದ ಆಧಾರದ ಮೇಲೆ ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ಬಿಇಒ ಹೇಮಂತ್ ರಾಜ್ 10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಲೋಕಾಯುಕ್ತರಿಗೆ ದೂರು ಸಲ್ಲಿಕೆಯಾಗಿದ್ದು, ಹಣ ಸ್ವೀಕರಿಸುವಾಗ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ ಬಿಇಒ ಹೇಮಂತ್ ರಾಜ್ಅವರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.