![](https://kannadadunia.com/wp-content/uploads/2023/01/accident.1.38550.jpg)
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ರನ್ ಪ್ರಕರಣ ದಾಖಲಾಗಿದ್ದು, ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಆನಂದ್ ರಾವ್ ಸರ್ಕಲ್ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಉಪ್ಪಾರಪೇಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.