ಬೆಂಗಳೂರು : ಕನ್ನಡ ನಾಮಫಲಕ ಅಳವಡಿಸುವಂತೆ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು,ನಗರದ ಹಲವು ಕಡೆ ಹಾಕಲಾಗಿದ್ದ ‘ಇಂಗ್ಲೀಷ್ ನಾಮಫಲಕ’ ಗಳನ್ನು ಧ್ವಂಸ ಮಾಡಿದ್ದಾರೆ.
ದೇವನಹಳ್ಳಿಯ ಸಾದಹಳ್ಳಿ ಟೋಲ್ ಬಳಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಹೋಟೆಲ್ ಗಳಲ್ಲಿ ಕನ್ನಡ ನಾಮಫಲಕ ಇಲ್ಲದಿರುವುದನ್ನು ವಿರೋಧಿಸಿ ಕನ್ನಡ ಪರ ಹೋರಾಟಗಾರರು ಹೋಟೆಲ್ ನಾಮಫಲಕವನ್ನು ಧ್ವಂಸಗೊಳಿಸಿದ್ದಾರೆ.
ಸಾಧಹಳ್ಳಿಯ ಬ್ಲೂಮ್ ಹೋಟೆಲ್ ಬಳಿ ಇರುವಂತಹ ಆಂಗ್ಲ ನಾಮಫಲಕವನ್ನು ಕಾರ್ಯಕರ್ತರು ಹೊಡೆದು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಕೆಲವು ಕಡೆ ಲೈಟಿಂಗ್ ಬೋರ್ಡ್ ಕೂಡ ಒಡೆದು ಹಾಕಿದ್ದಾರೆ ಎನ್ನಲಾಗಿದೆ. ಹತ್ತಾರು ಅಡಿಯ ನಾಮಫಲಕ ಬೋರ್ಡ್ ಗಳನ್ನು ಫಲಕಗಳನ್ನು ಕೀಳಲು ಯತ್ನಿಸಿದ್ದಾರೆ. ಈ ಹಿನ್ನೆಲೆ ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ಕಳುಹಿಸಲಾಗಿದೆ.
ಫೆ. 28 ರೊಳಗೆ ನಾಮಫಲಕದಲ್ಲಿ ಶೇ. 60 ರಷ್ಟು ‘ಕನ್ನಡ ಭಾಷೆ’ ಬಳಕೆ ಕಡ್ಡಾಯ
ಫೆ. 28 ರೊಳಗೆ ನಾಮಫಲಕದಲ್ಲಿ ಶೇ. 60 ರಷ್ಟು ‘ಕನ್ನಡ ಭಾಷೆ’ ಬಳಕೆ ಕಡ್ಡಾಯ ಎಂದು BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.ಮೆಟ್ರೋ, ನಿಲ್ದಾಣ, ಶಾಲೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಸೂಚಿಸಲಾಗಿತ್ತು. ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ಬಳಕೆಗೆ ಗಡುವು ನೀಡಲಾಗಿದೆ.
ಮುಂದಿನ ಫೆಬ್ರವರಿ 28 ರೊಳಗಾಗಿ ಶೇಕಡಾ 60 ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಎಂದರು. ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು, ಮಾಲ್ ಸೇರಿದಂತೆ ಇನ್ನಿತರೆ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕೆಂದು ಸೂಚನೆ ನೀಡಿದ್ದಾರೆ.