![](https://kannadadunia.com/wp-content/uploads/2022/05/KSRTC.jpg)
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳು ಅಪಘಾತಕ್ಕೀಡಾದಾಗ, ನಿಗಮದ ವಾಹನಗಳಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಆರ್ಥಿಕ ನೆರವು ನೀಡುವ ಸಲುವಾಗಿ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ನೀಡಲಾಗುವ ಪರಿಹಾರದ ಮೊತ್ತವನ್ನು 10 ಲಕ್ಷಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರಯಾಣಿಕರು ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಆರ್ಥಿಕ ನೆರವು ನೀಡುವ ಸಲುವಾಗಿ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ನೀಡಲಾಗುವ ಪರಿಹಾರವನ್ನು ಪ್ರಸ್ತುತ ರೂ.3,00,000/-(ಮೂರು ಲಕ್ಷ ರೂ. ಮಾತ್ರ) ಪರಿಹಾರ ನೀಡಲಾಗುತ್ತಿದೆ.
ಪ್ರಸ್ತುತ ಪಾವತಿಸುತ್ತಿರುವ ಪರಿಹಾರ ಮೊತ್ತವನ್ನು ದಿನಾಂಕ:01.03.2017 ರಿಂದ ಪಾವತಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಚರ್ಚಿಸಿ, ಪರಿಹಾರ ಮೊತ್ತವನ್ನು ದಿನಾಂಕ 31.10.2023 ರಂದು ಜರುಗಿದ 29ನೇ ಅಪಘಾತ ಪರಿಹಾರ ನಿಧಿ ಸಭೆಯಲ್ಲಿ 3,00,000 ರೂ.ದಿಂದ 10 ಲಕ್ಷಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
![](https://kannadadunia.com/wp-content/uploads/2023/12/WhatsApp-Image-2023-12-27-at-12.25.23-PM.jpeg)