HomeKarnatakaBREAKING : ಕನ್ನಡ ಭಾಷೆಗಾಗಿ ಬೆಂಗಳೂರಿನಲ್ಲಿ ರಸ್ತೆಗಿಳಿದ ‘ಕರವೇ’ : ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ...

BREAKING : ಕನ್ನಡ ಭಾಷೆಗಾಗಿ ಬೆಂಗಳೂರಿನಲ್ಲಿ ರಸ್ತೆಗಿಳಿದ ‘ಕರವೇ’ : ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಪೊಲೀಸ್ ವಶಕ್ಕೆ

ಬೆಂಗಳೂರು : ಕನ್ನಡ ಭಾಷೆಗಾಗಿ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೀದಿಗಿಳಿದು ಇಂದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ವೇಳೆ ಕನ್ನಡ ನಾಮಫಲಕ ಇಲ್ಲದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಬೋರ್ಡ್ನ್ನು ಧ್ವಂಸಗೊಳಿಸಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುವುದನ್ನು ಅರಿತ ಪೊಲೀಸರು ಹಲವಾರು ಕಾರ್ಯಕರ್ತರನ್ನು ಬಸ್ನಲ್ಲಿ ತುಂಬಿಸಿಕೊಂಡು ಹೋದರು. ಬೆಂಗಳೂರಿನ ಹುಣಸಮಾರಹಳ್ಳಿಯಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕನ್ನಡದಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸುವಂತೆ ಒತ್ತಾಯಿಸಿ ಬೆಂಗಳೂರಿನ ರಸ್ತೆಗಳಲ್ಲಿ ಇಂಗ್ಲಿಷ್ ಪೋಸ್ಟರ್ಗಳನ್ನು ಈ ಗುಂಪು ಹರಿದು ಹಾಕಿತು. ಬೆಂಗಳೂರಿನ ವಾಣಿಜ್ಯ ಸಂಸ್ಥೆಗಳು ಫೆಬ್ರವರಿ 28, 2024 ರೊಳಗೆ ತಮ್ಮ ನಾಮಫಲಕದಲ್ಲಿ ಶೇಕಡಾ 60 ರಷ್ಟು ಕನ್ನಡವನ್ನು ಬಳಸಬೇಕೆಂದು ಬಿಬಿಎಂಪಿಯ ಆದೇಶದ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಕರವೆ ಕಾರ್ಯಕರ್ತರು ದೇವನಹಳ್ಳಿ ಬಳಿ, ಲ್ಯಾವೆಲ್ಲಿ ರಸ್ತೆಯಲ್ಲಿ, ಯುಬಿ ಸಿಟಿ ಬಳಿ ಹಲವು ಇಂಗ್ಲಿಷ್ ನಾಮಫಲಕಗಳಿಗೆ ಕಪ್ಪು ಮಸಿ ಬಳಿದು, ನಾಮಫಲಕಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ದೊಡ್ಡ ದೊಡ್ಡ ಜಾಹೀರಾತು ಫಲಕ ಏರಿ ಇಂಗ್ಲೀಷ್ ನಾಮಫಲಕಗಳನ್ನು ಹರಿದು ಹಾಕಿದ್ದಾರೆ. ಕೆಲವು ಕಡೆ ಕಲ್ಲು ತೂರಾಟ ಕೂಡ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular