HomeKarnatakaಕರ್ನಾಟಕ ವಿವಿ ನೌಕರರ ಚುನಾವಣೆ; ಸೋಲಿನಿಂದ ನೊಂದು ಆತ್ಮಹತ್ಯೆಗೆ ಶರಣಾದ ಅಭ್ಯರ್ಥಿ

ಕರ್ನಾಟಕ ವಿವಿ ನೌಕರರ ಚುನಾವಣೆ; ಸೋಲಿನಿಂದ ನೊಂದು ಆತ್ಮಹತ್ಯೆಗೆ ಶರಣಾದ ಅಭ್ಯರ್ಥಿ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೌಕರರ ಸಹಕಾರ ಸಂಘದ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಮನನೊಂದ ಅಭ್ಯರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದ ಮುರುಘಾ ಮಠದ ಬಳಿ ನಡೆದಿದೆ.

ಚಂದ್ರಕಾಂತ್ ಸಾವಳಗಿ (55) ಆತ್ಮಹತ್ಯೆ ಮಾಡಿಕೊಂಡವರು. ವಿಶ್ವವಿದ್ಯಾಲಯದ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಚುನಾವಣೆ ಫಲಿತಾಂಶದ ಬಳಿಕ ಮನೆಗೆ ವಾಪಾಸ್ ಆಗಿದ್ದ ಚಂದ್ರಕಾಂತ್ ಸಾವಳಗಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶನಿವಾರ ವಿಶ್ವವಿದ್ಯಾಲಯದಿಂದ ಮನೆಗೆ ಬಂದಿದ್ದ ಚಂದ್ರಕಾಂತ್ ನಾಲ್ಕು ದಿನಗಳಾದರೂ ಮನೆಯಿಂದ ಹೊರ ಬಂದಿಲ್ಲ, ಬಾಗಿಲು ತೆರೆದಿರಲಿಲ್ಲ. ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಪೊಲೀಸರು ಸ್ಥಳಕ್ಕಾಗಮಿಸಿ ಬಾಗಿಲು ತೆರೆದು ನೋಡಿದಾಗ ಚಂದ್ರಕಾಂತ್ ನೇಣಿಗೆ ಕೊರಳೊಡ್ಡಿರುವುದು ಗೊತ್ತಾಗಿದೆ.

ವಿಶ್ವವಿದ್ಯಾಲಯದ ನೌಕರರ ಸಂಘದ ಚುನಾವಣೆಯಲ್ಲಿ ಸೋಲನುಭವಿಸಿದ್ದಕ್ಕೆ ಚಂದ್ರಕಾಂತ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular