ಬೆಂಗಳೂರು : ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಶೋಷಿತ ಸಮುದಾಯಗಳ ಒಕ್ಕೂಟ ಬೃಹತ್ ಅಹಿಂದ ಸಮಾವೇಶ ಮಾಡಲು ತೀರ್ಮಾನಿಸಿದ್ದು, ಇದೀಗ ಮುಹೂರ್ತ ಫಿಕ್ಸ್ ಆಗಿದೆ.
ಜನವರಿ 28ಕ್ಕೆ ಕೋಟೆನಾಡು ಚಿತ್ರದುರ್ಗದ ಶ್ರೀ ಬಸವ ಮೂರ್ತಿ ಮಾದರ ಚೆನ್ನಯ್ಯ ಪೀಠದ ಪಕ್ಕದ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಹೆಚ್. ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಿ ಯಥವತ್ತಾಗಿ ಅಂಗೀಕರಿಸಿ ಜಾರಿಗೊಳಿಸಬೇಕು.ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು. EWS 10% ಮೀಸಲಾತಿಯನ್ನು ರದ್ದು ಪಡಿಸುವಂತೆ ಒತ್ತಾಯಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಲಾಗಿದೆ. ರಾಜಕೀಯ ಮೀಸಲಾತಿಯನ್ನು ಲೋಕಸಭೆ, ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು.ಜನಸಂಖ್ಯೆ ಅನುಗುಣವಾಗಿ ಶೇಕಡಾವಾರು ಪ್ರಮಾಣದಲ್ಲಿ ಮೀಸಲಾತಿಯನ್ನು ಹೆಚ್ಚಿಸಬೇಕು,ಖಾಸಗಿ ಕ್ಷೇತ್ರಕ್ಕೂ ಮೀಸಲಾತಿ ವಿಸ್ತರಿಸಬೇಕು ಎಂದು ಅಹಿಂದ ಸಮಾವೇಶ ಒತ್ತಾಯಿಸಿದೆ.
ಆಯೋಜಕ ತಂಡವು 10 ಲಕ್ಷಕ್ಕೂ ಹೆಚ್ಚು ಜನರನ್ನು ಒಟ್ಟುಗೂಡಿಸಲು ಯೋಜಿಸಿದೆ ಮತ್ತು ಈ ಕಾರ್ಯಕ್ರಮಕ್ಕಾಗಿ ಈಗಾಗಲೇ ಅನೇಕ ಉಪ ಸಮಿತಿಗಳನ್ನು ರಚಿಸಿದೆ.