ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ.
ಶಯನ್(20) ಬಂಧಿತ ಯುವಕ ಎಂದು ಹೇಳಲಾಗಿದೆ. ದಕ್ಷಿಣ ಕೊಡಗಿನ ಬಾಳೆಲೆ ನಿವಾಸಿಯಾಗಿರುವ ಶಯನ್ ವಿರುದ್ಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಎಕ್ಸ್(ಟ್ವಿಟರ್) ಖಾತೆಯಲ್ಲಿ ಶಯನ್ ಅಶ್ಲೀಲ ಸಂದೇಶ ಪೋಸ್ಟ್ ಹಾಕಿದ್ದು, ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ನಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಇದನ್ನು ಆಧರಿಸಿ ಬಂಧಿಸಲಾಗಿದೆ ಎನ್ನಲಾಗಿದೆ.