alex Certify ಸುಳ್ಳು ದಾಖಲೆ ನೀಡಿ ʻಕಾರ್ಮಿಕ ಕಾರ್ಡ್ʼ ಪಡೆದವರಿಗೆ ಬಿಗ್ ಶಾಕ್!‌ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಳ್ಳು ದಾಖಲೆ ನೀಡಿ ʻಕಾರ್ಮಿಕ ಕಾರ್ಡ್ʼ ಪಡೆದವರಿಗೆ ಬಿಗ್ ಶಾಕ್!‌

ಬೆಂಗಳೂರು : ಸುಳ್ಳು ದಾಖಲೆಗಳನ್ನು ನೀಡಿ ಕಾರ್ಮಿಕರೆಂದು ನೋಂದಣಿ ಮಾಡಿಸಿಕೊಂಡು ಸೌಲಭ್ಯ ಪಡೆಯುತ್ತಿರುವವರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬಿಗ್‌ ಶಾಕ್‌ ನೀಡಿದೆ.

ಮಂಡಳಿಗೆ ನಕಲಿ ದಾಖಲೆ ನೀಡಿ ಕಾರ್ಮಿಕರೆಂದು ನೋಂದಣಿ ಮಾಡಿಸಿಕೊಂಡು ಮಂಡಳಿಯ ಸೌಲಭ್ಯಗಳನ್ನು ಪಡೆಯುವುದು ಶಿಕ್ಷಾರ್ಹ ಅಪರಾಧ. ಅಂತಹವರು ತಾವೇ ಖುದ್ದಾಗಿ ಹಿರಿಯ ಕಾರ್ಮಿಕ ನಿರೀಕ್ಷಕರು ಅಥವಾ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಭೇಟಿ ನೀಡಿ ಕಾರ್ಮಿಕ ಕಾರ್ಡ್  ರದ್ದುಪಡಿಸಿಕೊಳ್ಳತಕ್ಕದ್ದು ಎಂದು ಸೂಚನೆ ನೀಡಿದೆ.

ಕಟ್ಟಡ ನಿರ್ಮಾಣ ಕಾರ್ಮಿಕರಲ್ಲದವರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮ೦ಡಳಿಯಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿ ನೋಂದಣಿಯಾಗಿದ್ದು, ಇ೦ತಹ ನಕಲಿ ಕಾರ್ಮಿಕರು ತಾವೇ ಖುದ್ದಾಗಿ ಹಿರಿಯ ಕಾರ್ಮಿಕ ನಿರೀಕ್ಷಕರು / ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಿ ಮೂಲ ಗುರುತಿನ ಚೀಟಿಯನ್ನು ಹಿಂದಿರುಗಿಸುವ ಮೂಲಕ ತಮ್ಮ ನೋಂದಣಿಯನ್ನು ರದ್ದುಪಡಿಸಿಕೊಳ್ಳಬೇಕೆಂದು ಮನವಿ ಮಾಡಿಕೊಳ್ಳಲಾಗಿದೆ.

ಮಂಡಳಿಯ ವತಿಯಿಂದ ಇಂತಹ ನಕಲಿ ಅನರ್ಹ ಕಾರ್ಮಿಕರನ್ನು ಪತ್ತೆಹಚ್ಚಲು ರಾಜ್ಯಾದ್ಯಂತ ಪರಿಶೀಲನೆಯನ್ನು ನಡೆಸಲಾಗುತ್ತಿದೆ. ಪರಿಶೀಲನೆಯ ಸಮಯದಲ್ಲಿ ಅನರ್ಹರು ನೋಂದಣಿಯಾಗಿರುವುದು ಕಂಡುಬಂದಲ್ಲಿ ಅವರ ನೋಂದಣಿಯನ್ನು ರದ್ದುಪಡಿಸಿ, ಅವರು ಮಂಡಳಿಯಿಂದ ಇಲ್ಲಿಯವರೆಗೂ ಪಡೆದ ಎಲ್ಲಾ ಸೌಲಭ್ಯಗಳನ್ನು ದಂಡಸಹಿತ ಹಿಂಪಡೆಯಲು ಕ್ರಮ ವಹಿಸಲಾಗುವುದು ಹಾಗೂ ಅವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...