![](https://kannadadunia.com/wp-content/uploads/2023/09/Yuvanidhi-Scheme.jpg)
ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಎರಡನೇ ದಿನವಾದ ಬುಧವಾರ ಕೇವಲ 2032 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.
ಡಿಸೆಂಬರ್ 27 ರ ಸಂಜೆ 6 ಗಂಟೆವರೆಗೆ ರಾಜ್ಯಾದ್ಯಂತ ಕೇವಲ 2032 ಮಂದಿ ಮಾತ್ರ ಯುವನಿಧಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ನಡುವೆ ಅರ್ಹರಲ್ಲದವೂ ಯುವನಿಧಿ ಯೋಜನೆಗೆ ನೋಂದಾಯಿಸುತ್ತಿದ್ದಾರೆ. ಆದರೆ ಅಂತಹವರ ಅರ್ಜಿಗಳನ್ನು ತಿರಸ್ಕೃತಗೊಳ್ಳುತ್ತಿವೆ ಎಂದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ, ಡಿಪ್ಲೋಮಾ ಪಡೆದ ನಿರುದ್ಯೋಗಿಗಳು ತಮ್ಮ ಪದವಿಯ ನಂತರ 180ದಿನಗಳು ಕಳೆದ ನಂತರವೂ ಉದ್ಯೋಗ ಪಡೆಯದ ನಿರುದ್ಯೋಗಿಗಳಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸಿರುವವರು, ಸರ್ಕಾರದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿ ಅಪ್ರೆಂಟಿಸ್ ವೇತನವನ್ನು ಪಡೆಯುತ್ತಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕುಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಂತಿಲ್ಲ