ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಪ್ರಯೋಜನದಿಂದ ಯಾವುದೇ ಫಲಾನುಭವಿಗಳು ವಂಚಿತರಾಗಬಾರದು. ಈ ಕಾರಣಕ್ಕೆ ಯೋಜನೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳ ನಿವಾರಿಸಲು ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬುಧವಾರ ಗೃಹಲಕ್ಷ್ಮಿ ಅದಾಲತ್ ಗೆ ಬೆಳಗಾವಿ ತಾಲೂಕಿನ ಹಲಗಾದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಡಿಸೆಂಬರ್ 29ರ ವರೆಗೆ ರಾಜ್ಯದಾದ್ಯಂತ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಿಬಿರ ನಡೆಯಲಿದ್ದು, ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

ಯೋಜನೆ ಅನುಷ್ಠಾನದಲ್ಲಿ ಉಂಟಾದ ತಾಂತ್ರಿಕ ಸಮಸ್ಯೆ ಬಗೆಹರಿಸಿ ಸ್ಥಳದಲ್ಲಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಿಬಿರ ಆಯೋಜಿಸಲಾಗಿದೆ. ಫಲಾನುಭವಿಗಳು ಗ್ರಾಮ ಪಂಚಾಯತಿ ಕಚೇರಿಗೆ ತೆರಳಿ ಪ್ರಯೋಜನ ಪಡೆದುಕೊಳ್ಳುವಂತೆ ಅವರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read