ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಬಸ್ ಡಂಪರ್ ಗೆ ಡಿಕ್ಕಿ ಹೊಡೆದ ಪರಿಣಾಮ 13 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಗಾಯಗೊಂಡ 18 ಕ್ಕೂ ಹೆಚ್ಚು ಜನರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ.
11 ಪ್ರಯಾಣಿಕರ ಸಾವನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ಖಾಸಗಿ ಬಸ್ಸಿನಲ್ಲಿ 45 ಪ್ರಯಾಣಿಕರಿದ್ದರು. ಸತ್ತವರ ಸಂಖ್ಯೆ ಹೆಚ್ಚಾಗಬಹುದು ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಎಸ್ಪಿ ವಿಜಯ್ ಖತ್ರಿ ಕೂಡ ಇದನ್ನು ದೃಢಪಡಿಸಿದ್ದಾರೆ.
ಗುನಾ-ಆರನ್ ರಸ್ತೆಯಲ್ಲಿ ಡಂಪರ್ ಗೆ ಡಿಕ್ಕಿ ಹೊಡೆದ ನಂತರ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ಗಾಯಗೊಂಡ ಹದಿನಾಲ್ಕು ಜನರನ್ನು ಗುನಾದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಶವಗಳನ್ನು ಹೊರತೆಗೆಯುವುದು ಮತ್ತು ಗಾಯಗೊಂಡವರಿಗೆ ಚಿಕಿತ್ಸೆ ನೀಡುವುದು ನಮ್ಮ ಆದ್ಯತೆಯಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಮೃತರನ್ನು ಗುರುತಿಸಲಾಗಿಲ್ಲ ಎಂದು ಕಲೆಕ್ಟರ್ ತಿಳಿಸಿದ್ದಾರೆ. ಆಸ್ಪತ್ರೆಗೆ ದಾಖಲಾದ ಹಲವರ ಸ್ಥಿತಿ ಗಂಭೀರವಾಗಿದೆ. ಎಂದು ಗುನಾ ಜಿಲ್ಲಾಧಿಕಾರಿ ತರುಣ್ ರಾಠಿ ತಿಳಿಸಿದ್ದಾರೆ.
ಗುನಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಆದೇಶಿಸಿದ್ದಾರೆ. ಘಟನೆಯ ಎಲ್ಲಾ ಅಂಶಗಳ ಬಗ್ಗೆ ತನಿಖೆ ನಡೆಸಲಾಗುವುದು. ಇಂತಹ ಅಪಘಾತಗಳು ಮರುಕಳಿಸದಂತೆ ನೋಡಿಕೊಳ್ಳುವಂತೆ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ರೂ., ಗಾಯಗೊಂಡವರಿಗೆ 50-50 ಸಾವಿರ ರೂ.ಗಳ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಡಾ.ಯಾದವ್ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.