HomeKarnatakaBREAKING : ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ 29 ಕಾರ್ಯಕರ್ತರಿಗೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಆದೇಶ

BREAKING : ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ 29 ಕಾರ್ಯಕರ್ತರಿಗೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಆದೇಶ

ಬೆಂಗಳೂರು : ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ್ದು, ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು.

ನಾರಾಯಣಗೌಡ ಸೇರಿದಂತೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದು ಜೆಎಂಎಫ್‌ ಸಿ ಕೋರ್ಟ್‌ ಗೆ ಪೊಲೀಸರು ಹಾಜರುಪಡಿಸಿದ್ದರು.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಜೆಎಂಎಫ್‌ ಸಿ ನ್ಯಾಯಾಲಯವು ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ  29 ಕಾರ್ಯಕರ್ತರ ನ್ಯಾಯಾಂಗ ಬಂಧನಕ್ಕೆ  ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾರಾಯಣ ಗೌಡ ಸೇರಿದಂತೆ 29 ಕಾರ್ಯಕರ್ತರಿಗೆ ಜನವರಿ ೧೦ ರವರೆಗೆ ಅಂದರೆ ಒಟ್ಟು ೧೪ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಆದೇಶ ಹೊರಡಿಸಿದ್ದು, ಸದ್ಯ ಇವರನ್ನು ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular