![](https://kannadadunia.com/wp-content/uploads/2023/07/14mys517-krs-water-1-1010230-1626648681.jpg)
ಮಂಡ್ಯ : ರೈತರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಕೆಆರ್ ಎಸ್ ನಿಂದ ನಾಲೆಗಳಿಗೆ ನೀರು ಹರಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ.
ಕೆಆರ್ ಎಸ್ ಜಲಾಶಯದಲ್ಲಿ ನೀರು ಬರಿದಾಗುತ್ತಿರುವ ಕಾರಣ ಸರ್ಕಾರ ಇದೀಗ ಬೇಸಿಗೆ ಬೆಳೆಗೆ ನೀರು ಹರಿಸದಿರಲು ತಿರ್ಮಾನ ಮಾಡಿದ್ದು, ಬೇಸಿಗೆ ಬೆಳೆಗಳನ್ನು ಬೆಳೆಯದಂತೆ ರೈತರಿಗೆ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ.
ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಈ ಬಾರಿ ಜಲಾಯಶ ಭರ್ತಿಯಾಗಿಲ್ಲ. ಹೀಗಾಗಿ ಜಲಾಶಯದಲ್ಲಿ ಇರುವ ನೀರಿನ ಲಭ್ಯತೆಯನ್ನ ನೋಡಿಕೊಂಡು, ಕುಡಿಯುವುದಕ್ಕೆ ಮೀಸಲು ಇಟ್ಟು, ಬೇಸಿಗೆ ಬೆಳೆಗೆ ನೀರು ಹರಿಸದಿರಲು ಸರ್ಕಾರ ತೀರ್ಮಾನ ಮಾಡಿದೆ.