ನವದೆಹಲಿ : ದೆಹಲಿ ಪೊಲೀಸರ ವಿಶೇಷ ಸೆಲ್ ಗುರುವಾರ (ಡಿಸೆಂಬರ್ 28) ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಭಾಗಿಯಾಗಿರುವ ಎಲ್ಲಾ ಶಂಕಿತರ ಪಾಲಿಗ್ರಾಫ್ ಪರೀಕ್ಷೆಗಳನ್ನು ನಡೆಸಲು ಅನುಮತಿ ಕೋರಿದೆ.
ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣದ ಪ್ರಮುಖ ಆರೋಪಿಗಳಾದ ಮನೋರಂಜನ್ ಡಿ, ಸಾಗರ್ ಶರ್ಮಾ, ಅಮೋಲ್ ಧನರಾಜ್ ಶಿಂಧೆ ಮತ್ತು ನೀಲಂ ದೇವಿ ಅವರಿಗೆ ಪಾಲಿಗ್ರಾಫ್ ಪರೀಕ್ಷೆಗಳನ್ನು ನಡೆಸಲು ಅನುಮತಿ ಕೋರಿದೆ. ನ್ಯಾಯಾಲಯವು ಈ ವಿಷಯದ ಕುರಿತು ಜನವರಿ 2, 2024 ರಂದು ತನ್ನ ನಿರ್ಧಾರ ಪ್ರಕಟಿಸಲಿದೆ.